ಮಹಿಳಾ ಉದ್ಯಮಶೀಲತೆ ವಿಕಸಿತ ಭಾರತ 2047ರ ನಿರ್ಮಾಣಕ್ಕೆ ಮಹತ್ವದ ಶಕ್ತಿ: ರಾಜ್ಯಪಾಲರಾದ ಡಾ. ಸುಧಾ ಯಾದವ್

ಬೆಂಗಳೂರು: ಮಹಿಳಾ ಉದ್ಯಮಶೀಲತೆಯನ್ನು(Women’s Entrepreneurship) ಉತ್ತೇಜಿಸಲು ಬಲಿಷ್ಠ ವ್ಯವಸ್ಥೆಯನ್ನು ರೂಪಿಸುವಂತೆ ಕರೆ ನೀಡಿದ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್(Dr.Sudha Yadav) ಅವರು, ಮಹಿಳೆಯರು ಉದ್ಯೋಗ ಸೃಷ್ಟಿಕರ್ತರು, ನವೋದ್ಯಮಿಗಳು ಹಾಗೂ ಉದ್ಯಮ ನಾಯಕರಾಗಿ ಹೊರಹೊಮ್ಮುವುದು 2047ರ ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಫೆಡರೇಷನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (FKCCI) ಆಯೋಜಿಸಿದ್ದ ಮಹಿಳಾ ಉದ್ಯಮಶೀಲತಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಮಹಿಳಾ ಉದ್ಯಮಶೀಲತೆ ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದ್ದು, ಪ್ರಾಚೀನ ಕಾಲದಿಂದಲೂ ದೇಶದ ಸಾಮಾಜಿಕ ಹಾಗೂ ಆರ್ಥಿಕ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ಮಹಿಳೆಯರು ಸಾಂಪ್ರದಾಯಿಕವಾಗಿ ಕುಟುಂಬ ನಿರ್ವಹಣೆ, ಸಂಪನ್ಮೂಲಗಳ ಬಳಕೆ ಹಾಗೂ ಆರ್ಥಿಕ ನಿರ್ವಹಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದ್ದಾರೆ. ಮಹಿಳೆಯರಲ್ಲಿ ಅತ್ಯುತ್ತಮ ನಿರ್ವಹಣಾ ಸಾಮರ್ಥ್ಯವಿದೆ. ಅವರಿಗೆ ಅಗತ್ಯ ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ಒದಗಿಸಿದಾಗ, ಅವರು ಕೇವಲ ಲಾಭ ಗಳಿಸುವುದಷ್ಟೇ ಅಲ್ಲದೆ, ಕರುಣೆ, ನೈತಿಕತೆ ಮತ್ತು ಸುಸ್ಥಿರತೆಯೊಂದಿಗೆ ಇಡೀ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾರೆ ಎಂದು ಹೇಳಿದರು.

ಭಾರತೀಯ ಮಹಿಳಾ ಉದ್ಯಮಿಗಳು ಸಾಂಪ್ರದಾಯಿಕ ಕರಕುಶಲ ಕಲೆ ಮತ್ತು ಗುಡಿ ಕೈಗಾರಿಕೆಗಳಿಂದ ಹಿಡಿದು ಜೈವಿಕ ತಂತ್ರಜ್ಞಾನ, ಔಷಧೋದ್ಯಮ, ಇ-ಕಾಮರ್ಸ್, ಫಿನ್‌ಟೆಕ್, ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ ವಿಜ್ಞಾನ ಹಾಗೂ ರಕ್ಷಣಾ ಕ್ಷೇತ್ರಗಳವರೆಗೆ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸುತ್ತಲೇ ವೃತ್ತಿ ಮತ್ತು ಉದ್ಯಮ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಗಳನ್ನು ಮಾಡುತ್ತಿದ್ದಾರೆ.

ಗ್ರಾಮೀಣ ಮಹಿಳೆಯರಲ್ಲಿ ಪ್ರತಿಭೆ, ಪರಿಶ್ರಮ ಮತ್ತು ನವೀನ ಆಲೋಚನೆಗಳಿದ್ದರೂ, ತಮ್ಮ ಉದ್ಯಮಗಳನ್ನು ವಿಸ್ತರಿಸಲು ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಮಾರುಕಟ್ಟೆ ಸಂಪರ್ಕದ ಅಗತ್ಯವಿದೆ. ಇಂತಹ ಮಹಿಳಾ ಉದ್ಯಮಿಗಳಿಗೆ ಅವರ ಜಿಲ್ಲೆಗಳಲ್ಲಿಯೇ ತರಬೇತಿ ಹಾಗೂ ಅಗತ್ಯ ನೆರವು ಒದಗಿಸಲು ಎಫ್‌ಕೆಸಿಸಿಐ ಮತ್ತು ಉದ್ಯಮ ವಲಯದವರು ಮುಂದಾಗಬೇಕು ಎಂದು ಕರೆ ನೀಡಿದರು.

ಮಹಿಳಾ ಉದ್ಯಮಶೀಲತೆಯನ್ನು ಬೆಂಗಳೂರಿಗೆ ಮಾತ್ರ ಸೀಮಿತಗೊಳಿಸದೆ ಕಲಬುರಗಿ, ಬೆಳಗಾವಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಮಹಿಳಾ ಉದ್ಯಮಿಗಳನ್ನು ಮುಖ್ಯವಾಹಿನಿಗೆ ತರಬೇಕು. ಅವರಿಗೆ ತಂತ್ರಜ್ಞಾನ, ಹೂಡಿಕೆ ಹಾಗೂ ವಿಶಾಲ ಮಾರುಕಟ್ಟೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದಲ್ಲಿ ಮಹಿಳೆಯರ ಆರ್ಥಿಕ ಪಾಲ್ಗೊಳ್ಳುವಿಕೆ ನಿರ್ಣಾಯಕ ಪಾತ್ರ ವಹಿಸಲಿದೆ. ಭಾರತದ ಒಟ್ಟು ಜನಸಂಖ್ಯೆಯಲ್ಲಿ ಮಹಿಳೆಯರ ಪಾಲು ಅರ್ಧದಷ್ಟಿದ್ದು, ಮಹಿಳೆಯರು ಸಂಪೂರ್ಣ ಆರ್ಥಿಕವಾಗಿ ಸಬಲರಾಗದೆ ರಾಷ್ಟ್ರದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

“ಗ್ರಾಮಗಳಿಂದ ಮಹಾನಗರಗಳವರೆಗೆ ಮಹಿಳೆಯರು ಉದ್ಯೋಗ ಸೃಷ್ಟಿಕರ್ತರಾಗಿ ಹೊರಹೊಮ್ಮಿ, ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಜಾಗತಿಕ ರಫ್ತು ಕ್ಷೇತ್ರವನ್ನು ಮುನ್ನಡೆಸಿದಾಗ ಮಾತ್ರ 2047ರ ವೇಳೆಗೆ ಭಾರತವು ವಿಶ್ವದ ಅತ್ಯಂತ ಬಲಿಷ್ಠ ಮತ್ತು ಸಮಗ್ರ ಆರ್ಥಿಕತೆಯಾಗಿ ಹೊರಹೊಮ್ಮಲಿದೆ” ಎಂದು ಹೇಳಿದರು.

 

Hot this week

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

Topics

BIG NEWS : ಅಪ್ರಾಪ್ತರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು!

ಮುಂಬೈನಲ್ಲಿ (Mumbai) ಸಾರ್ವಜನಿಕ ಉದ್ಯಾನವನದಲ್ಲಿ ಯುವ ಜೋಡಿಗೆ ಕಿರುಕುಳ, ಹಲ್ಲೆ ಆರೋಪ;...

ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ...

ಬೆಂಗಳೂರು: ರಾಜ್ಯದಲ್ಲಿ ವಿಜ್ಞಾನ ಆಧಾರಿತ ಪರಿಸರ ಪುನರುಜ್ಜೀವನ ಮತ್ತು ಪರಿಸರ ಸಾಕ್ಷರತೆಯನ್ನು...

Related Articles