ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ

ಬೆಂಗಳೂರು, ಜುಲೈ 03 : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ(Alcohol Temperance Board) ಹಾಗೂ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 04, 2026 ರ ಶನಿವಾರ ಬೆಳಿಗ್ಗೆ 11.00 ಗಂಟೆಗೆ ಮೈಸೂರು ರಸ್ತೆಯ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಆವರಣದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ(World Anti-Drug Day Observance) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚುತ್ತಿರುವ ಮಾದಕ ವ್ಯಸನ – ನಾಗರಿಕರ ಒಗ್ಗಟ್ಟಿಗೆ ಕರೆ:

ಮಾದಕ ವಸ್ತುಗಳ ಅಂತಾರಾಷ್ಟ್ರೀಯ ಕಳ್ಳಸಾಗಣೆ ಜಾಲವು ಬೃಹತ್ತಾಗಿ ಬೆಳೆಯುತ್ತಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಮಾದಕ ವಸ್ತುಗಳ ಸೇವನೆಯ ಚಟ ಕ್ರಮೇಣ ಹೆಚ್ಚತೊಡಗಿದೆ. ದೆಹಲಿ ಮತ್ತು ಮುಂಬೈಗಳಲ್ಲಿ ಅತಿ ಹೆಚ್ಚು ಮಂದಿ ಮಾದಕ ವಸ್ತುಗಳ ದಾಸರಾಗಿದ್ದು, ಇವರ ಸಂಖ್ಯೆ ಪ್ರತಿ ವರ್ಷ ಶೇ.15%ರಷ್ಟು ಹೆಚ್ಚುತ್ತಿದೆ. ದುರದೃಷ್ಟವಶಾತ್, 16 ರಿಂದ 20 ವರ್ಷ ವಯಸ್ಸಿನ ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಈ ಚಟಕ್ಕೆ ಬಲಿಯಾಗುತ್ತಿದ್ದಾರೆ.

ಪ್ರಸ್ತುತ ಮಾದಕ ವಸ್ತುಗಳನ್ನು ಮಾರಾಟ ಮಾಡುವವರಿಗೆ 10 ರಿಂದ 20 ವರ್ಷಗಳ ಶಿಕ್ಷೆ ಹಾಗೂ 1 ರಿಂದ 2 ಲಕ್ಷ ರೂಪಾಯಿ ದಂಡ ವಿಧಿಸುವ ಕಾನೂನು ಜಾರಿಯಲ್ಲಿದ್ದರೂ, ಈ ಜಾಲದ ಪೂರ್ಣ ನಿಗ್ರಹ ಕೇವಲ ಪೊಲೀಸರಿಂದ ಮಾತ್ರ ಸಾಧ್ಯವಿಲ್ಲ. ಈ ಸಮಸ್ಯೆಯ ನಿವಾರಣೆಗೆ(relief) ಸಮಾಜದ ಒಳಿತು ಮತ್ತು ನೆಮ್ಮದಿಯನ್ನು ಬಯಸುವ ಎಲ್ಲಾ ನಾಗರಿಕರು ಸಂಘಟಿತ ಪ್ರಯತ್ನ ನಡೆಸಬೇಕು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದೇವರು, ಇಳಕಲ್‍ನ ಚಿತ್ತರಗಿ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ. ಗುರುಮಹಾಂತ ಸ್ವಾಮಿಗಳು, ಭಾಲ್ಕಿಯ ಪೂಜ್ಯ ಶ್ರೀ ಶ್ರೀ ಶ್ರೀ ಗುರುಬಸವ ಪಟ್ಟದೇವರು ಹಾಗೂ ಬೆಂಗಳೂರಿನ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿಶ್ಚಲಾನಂದನಾಥ ಮಹಾಸ್ವಾಮಿಗಳು ವಹಿಸಲಿದ್ದಾರೆ.

ಕರ್ನಾಟಕ ಸರ್ಕಾರದ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವ್ಯಸನಮುಕ್ತ ಸಮಾಜ ನಿರ್ಮಾಣದ ಕುರಿತು ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ್ ಮತ್ತು ಆಳಂದ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಆರ್.ಪಾಟೀಲ್ ಅವರು ಸಂದೇಶ ನೀಡಲಿದ್ದಾರೆ.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ.ವೂಡೇ ಪಿ.ಕೃಷ್ಣ ಅವರು ಆಶಯ ನುಡಿಗಳನ್ನಾಡಲಿದ್ದು, ಸಂಸ್ಥೆಯ ಕೋಶಾಧ್ಯಕ್ಷರಾದ ಹೆಚ್.ಬಿ.ದಿನೇಶ್ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ರಾಜ್ಯ ಮಾಹಿತಿ ಆಯುಕ್ತರಾದ ಡಾ.ಬಿ.ಆರ್.ಮಮತಾ, ನಿವೃತ್ತ ಉಪನ್ಯಾಸಕರಾದ ಪ್ರೊ.ಜಿ.ಬಿ.ಶಿವರಾಜು ಮತ್ತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಭಾಗವಹಿಸಲಿದ್ದಾರೆ.

‘ವ್ಯಸನಮುಕ್ತ ಸಮಾಜ ಕಟ್ಟೋಣ’ ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಾಗಿ ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಕಾರ್ಯದರ್ಶಿ ಎಂ.ಸಿ.ನರೇಂದ್ರ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್.ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಾಟರ್ ಮಾಫಿಯದಲ್ಲಿ ಭಾಗಿ ಕಂದಾಯ ವಸೂಲಿಗಾರ ಶಶಿಕಾಂತ್ ಬೆಳ್ಳೂರು ಅಮಾನತ್ತು ಮಾಡಿ-ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ಒತ್ತಾಯ

ಬೆಂಗಳೂರು: ಶಶಿಕಾಂತ್ ಬೆಳ್ಳೂರ ಕಂದಾಯ(Revenue) ವಸೂಲಿಗಾರರಾಗಿ ವಾರ್ಡ್ -41ರಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಇವರ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಬೆಂಗಳೂರು, ಜುಲೈ 03: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2026-27ನೇ...

ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 03 :ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ (Higher Education)...

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆ

ರಾಜ್ಯ ಮಟ್ಟದ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಬೆಂಗಳೂರು, ಜುಲೈ 03...

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ

ಆದಿತ್ಯ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ ಅದ್ಧೂರಿಯಾಗಿ ಗುರು ವಂದನಾ(Salutation to the...

Topics

ಇಸ್ರೋ ಕೇಂದ್ರ ಕಛೇರಿಗೆ ಬಂದಿರುವ ಹುಸಿ ಬಾಂಬ್ ಬೆದರಿಕೆ ಸಂದೇಶದ ಪರಿಶೀಲನೆ

ಇಸ್ರೋ ಕೇಂದ್ರ ಕಛೇರಿಗೆ ಬಂದಿರುವ ಹುಸಿ ಬಾಂಬ್ ಬೆದರಿಕೆ(|Threat) ಸಂದೇಶದ ಪರಿಶೀಲನೆಸಂಜಯನಗರ...

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು

ತಿರುಪತಿ : ಆಂಧ್ರಪ್ರದೇಶದ ತಿರುಪತಿಯ ತಿರುಮಲ ವೆಂಕಟೇಶ್ವರ (Tirumala Venkaeswara of...

ಫಸಲ್ ಬಿಮಾ ಯೋಜನೆ :ಬೆಳೆ ವಿಮೆ ಪ್ರಸ್ತಾವನೆಗಳಿಗೆ ಬೆಳೆ ಹೊಂದಾಣಿಕೆ ಮಾಡಲು ಅನುಮತಿ ನೀಡಿ ಆದೇಶ

ಬೆಂಗಳೂರು : 2026-27ನೇ ಸಾಲಿನಿಂದ ಅನ್ವಯವಾಗುವಂತೆ ಕೆಲವು ವಿನಾಯಿತಿಗಳು ಹಾಗೂ ಷರತ್ತುಗಳನ್ನು...

Related Articles