ಇ.ಎಸ್.ಐ.ಸಿ  ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ

“ಪ್ರತಿ ಹೃದಯ ಬಡಿತವೂ ಮಹತ್ವದ್ದು” ಎಂಬ ಧ್ಯೇಯವಾಕ್ಯದೊಂದಿಗೆ ಇ.ಎಸ್.ಐ.ಸಿ  ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ

ಬೆಂಗಳೂರು: ರಾಜಾಜಿನಗರದ(Rajajinagara) ಇ.ಎಸ್.ಐ.ಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ “ಪ್ರತಿ ಹೃದಯ ಬಡಿತವೂ ಮಹತ್ವದ್ದು”(Every Heartbeart matters) ಎಂಬ ಧ್ಯೇಯವಾಕ್ಯದೊಂದಿಗೆ ವಿಶ್ವ ಹೃದಯ ದಿನ ಆಚರಿಸಲಾಯಿತು. ಹೃದಯ ಮತ್ತು ರಕ್ತನಾಳ ಸಂಬಂಧಿತ ಆರೋಗ್ಯ, ಹೃದಯ ಕಾಯಿಲೆಗಳ ತಡೆಗಟ್ಟುವಿಕೆ ಹಾಗೂ ಸಮಯೋಚಿತ ಆರೋಗ್ಯ ತಪಾಸಣೆಯ ಮಹತ್ವವನ್ನು ಕಾರ್ಯಕ್ರಮದಲ್ಲಿ ಪ್ರತಿಪಾದಿಸಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯ ಕುಮಾರಿ, ಡೀನ್ ಡಾ. ಜಿತೇಂದ್ರ ಕುಮಾರ್, ಶೈಕ್ಷಣಿಕ ನೋಂದಣಾಧಿಕಾರಿ ಡಾ. ರಘುನಾಥ್, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಶಾಂತಿನಿ, ಡಾ. ದೀಪಕ್ ಹಾಗೂ ಡಾ. ವೀರೇಂದ್ರ, ಜಂಟಿ ನಿರ್ದೇಶಕರಾದ ಬ್ರಿಜೇಶ್ ಮೀನಾ, ಉಪ ನಿರ್ದೇಶಕರಾದ ರಾಮರಾಜ್ ಮೀನಾ, ಸಹಾಯಕ ನಿರ್ದೇಶಕರಾದ ಅನುರಾಧಾ ಸುಬ್ರಮಣಿ, ಹೃದಯರೋಗ ವಿಭಾಗದ ಮುಖ್ಯಸ್ಥರಾದ ಡಾ. ಮಂಜುಳಾ, ವಿಧಿ ವಿಜ್ಞಾನ ಔಷಧ ವಿಭಾಗದ ಮುಖ್ಯಸ್ಥರಾದ ಡಾ. ಸಂಗ್ರಾಮ್‌, ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಕುಬೇರನ್, ಮ್ಯಾಟ್ರನ್‌ಗಳಾದ ಸುಧಾಕರ್ ಮತ್ತು ಮಂಜುನಾಥ್ ಇ.ಎಸ್.ಐ.ಸಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಉದ್ಯೋಗಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಡಾ. ದೀಪ್ತಿ ಮತ್ತು ಡಾ. ಗಿರೀಶ್  ಎಂ.ಎಸ್.‌  ಅವರು ಸಂಯೋಜಿಸಿದರು. ಮಂಜುನಾಥ್, ಚಿರಂಜೀವಿ, ಸಂತೋಷ್‌ ಅವರು ಕಾರ್ಯಕ್ರಮದ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸಿದರು.

ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯ ಕುಮಾರಿ ಮಾತನಾಡಿ, ಹೃದಯ ಸಂಬಂಧಿತ ಕಾಯಿಲೆಗಳ ಕುರಿತು ಜಾಗೃತಿ ಮೂಡಿಸುವುದು, ಅವುಗಳನ್ನು ತಡೆಗಟ್ಟುವುದು ಹಾಗೂ ಆರಂಭಿಕ ಹಂತದಲ್ಲಿಯೇ ಕಾಯಿಲೆಗಳನ್ನು ಪತ್ತೆಹಚ್ಚಿದರೆ ಹೃದಯ ಸಮಸ್ಯೆಯನ್ನು ನಿಯಂತ್ರಿಸಬಹುದು. ಈ ಬಾರಿಯ ಧ್ಯೇಯವಾಕ್ಯದಂತೆ ಪ್ರತಿಯೊಂದು ಹೃದಯ ಬಡಿತವೂ ಮುಖ್ಯ. ಇದನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಡಾ. ರೇಖಾ, ಡಾ. ಪ್ರಶಾಂತ್ ಹಾಗೂ  ಪ್ರಿಯದರ್ಶಿನಿ ಅವರು ಹೃದಯ ಕಾಯಿಲೆಗಳು, ಅವುಗಳ ಅಪಾಯದ ಅಂಶಗಳು, ತಡೆಗಟ್ಟುವ ಕ್ರಮಗಳು ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಹೃದಯ ದಿನದ ಪ್ರತಿಜ್ಞೆಯನ್ನು ಹೃದಯರೋಗ ವಿಭಾಗದ ಮುಖ್ಯಸ್ಥರಾದ ಡಾ. ಮಂಜುಳಾ ಬೋಧಿಸಿದರು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಕ್ರಿಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಎಲ್ಲರಿಗೂ ಕರೆ ನೀಡಿದರು.

ಹೃದಯ ಹಾಗೂ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles